Mysore
28
scattered clouds

Social Media

ಗುರುವಾರ, 30 ಏಪ್ರಿಲ 2026
Light
Dark

ಓದುಗರ ಪತ್ರ | ಬೇಸಿಗೆಯಲ್ಲಿ ವಿದ್ಯುತ್ ದರ ಏರಿಕೆಯ ಬರೆ

ಓದುಗರ ಪತ್ರ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್‌ಸಿ), ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ಪ್ರತಿ ಯೂನಿಟ್‌ಗೆ ೮೫ ಪೈಸೆಯಷ್ಟು ಏರಿಕೆ ಮಾಡಿರುವುದು ಅವೈಜ್ಞಾನಿಕವಾಗಿದೆ. ಈ ಬಿರು ಬೇಸಿಗೆಯಲ್ಲಿ ಸಾರ್ವಜನಿಕರು ಫ್ಯಾನ್, ಏರ್ ಕೂಲರ್ ಗಳನ್ನು ಹೆಚ್ಚಾಗಿ ಬಳಸುವುದರಿಂದ ವಿದ್ಯುತ್ ಬಿಲ್ ಬೇಸಿಗೆಯಲ್ಲಿ ಹೆಚ್ಚು ಬರುತ್ತದೆ. ರಾಜ್ಯ ಸರ್ಕಾರ ಪ್ರತಿ ತಿಂಗಳು ನೀಡುತ್ತಿರುವ ಉಚಿತ ೨೦೦ ಯೂನಿಟ್‌ಗಳವರೆಗಿನ ಗೃಹ ಬಳಕೆಯ ವಿದ್ಯುತ್ ಅನ್ನು ೩೦೦ ಯೂನಿಟ್ ವರೆಗೆ ಹೆಚ್ಚಿಸಬೇಕು, ಇಲ್ಲವೇ ವಿದ್ಯುತ್ ದರ ಹೆಚ್ಚಳವನ್ನು ವಾಪಸ್ ಪಡೆಯಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು.

Tags:
error: Content is protected !!