Mysore
28
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ ನಿಯೋಗ

ನವದೆಹಲಿ: ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಿಯೋಗ ಚುನಾವಣಾ ಆಯೋಗದ ಮೆಟ್ಟಿಲೇರಿದೆ.

ಖರ್ಗೆ ಅವರ ಹೇಳಿಕೆಗೆ ಆಕ್ಷೇಪಣೆ ವ್ಯಕ್ತಪಡಿಸಲು ಕೇಂದ್ರ ಸಚಿವ ಕಿರಣ್‌ ರಿಜಿಜು ನೇತೃತ್ವದ ಬಿಜೆಪಿ ನಿಯೋಗ ಇಂದು ಚುನಾವಣಾ ಆಯೋಗವನ್ನು ಭೇಟಿ ಮಾಡಿದೆ.

ಈ ಬಗ್ಗೆ ಮಾತನಾಡಿರುವ ಸಚಿವ ಕಿರಣ್‌ ರಿಜಿಜು ಅವರು ಪ್ರಧಾನಿಯನ್ನು ಭಯೋತ್ಪಾದಕ ಎಂದು ಕರೆಯುವುದು ಇಡೀ ದೇಶಕ್ಕೆ ಅಪಮಾನ. ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕವಾಗಿ ಪ್ರಧಾನಿಗಳನ್ನು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.

Tags:
error: Content is protected !!