Mysore
22
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ.

ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ ಧಾರವಾಡದಲ್ಲಿಯೇ ಆಕಾಶವಾಣಿ ಕೇಂದ್ರ ಮುಂದುವರಿಯಲಿದೆ.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ಮನವಿ ಮೇರೆಗೆ ಪ್ರಸಾರ ಭಾರತಿ ಈ ಕ್ರಮಕ್ಕೆ ಮುಂದಾಗಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಮನೆ ಮಾತಾಗಿರುವ ಜನಪ್ರಿಯ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಸಚಿವರು ಕೇಂದ್ರದ ಗಮನ ಸೆಳೆದಿದ್ದರು.

ಈ ಹಿನ್ನೆಲೆಯಲ್ಲಿ ಸಂಸದರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಸಂಪರ್ಕಿಸಿ ಆಕಾಶವಾಣಿ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಕೋರಿದ್ದರು. ಧಾರವಾಡ ಪ್ರಸಾರ ಭಾರತೀಯ ಕೇಂದ್ರದ ಕಾರ್ಯವ್ಯಾಪ್ತಿ ಮತ್ತು ಅದನ್ನು ಧಾರವಾಡದಲ್ಲಿಯೇ ಮುಂದುವರಿಸುವ ಅವಶ್ಯಕತೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು.

ಸಚಿವ ಪ್ರಹ್ಲಾದ್‌ ಜೋಶಿ ಮನವಿಗೆ ಸ್ಪಂದಿಸಿದ ಸಚಿವ ಅಶ್ವಿನಿ ವೈಷ್ಣವ್‌ ಅವರು, ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಪ್ರಸಾರ ಭಾರತಿಗೆ ಆದೇಶಿಸಿದ್ದಾರೆ.

 

Tags:
error: Content is protected !!