Mysore
36
few clouds

Social Media

ಸೋಮವಾರ, 27 ಏಪ್ರಿಲ 2026
Light
Dark

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ತೃತೀಯ ಭಾಷೆ ಅಂಕಗಳ ಹಂಚಿಕೆ ವಿಚಾರವಾಗಿ ಸೃಷ್ಟಿಯಾಗಿದ್ದ ಕಾನೂನು ಗೊಂದಲಗಳು ಪರಿಹಾರವಾಗಿದ್ದು, ನಾಳೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ.

ಇಂದು ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಮಧು ಬಂಗಾರಪ್ಪ ಅವರು ಈ ವಿಷಯವನ್ನು ಖಚಿತಪಡಿಸಿದ್ದಾರೆ.

ನಮಗೆ ಮಕ್ಕಳ ಭವಿಷ್ಯ ಮತ್ತು ಅವರ ಹಿತದೃಷ್ಟಿ ಅತ್ಯಂತ ಮುಖ್ಯ. ಹೀಗಾಗಿ ನ್ಯಾಯಾಲಯದ ನಿರ್ದೇಶನವನ್ನು ಗೌರವಿಸಿ ಈ ವರ್ಷ ಅಂಕಗಳನ್ನೇ ನೀಡಲು ತೀರ್ಮಾನಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

 

Tags:
error: Content is protected !!