Mysore
23
overcast clouds

Social Media

ಗುರುವಾರ, 11 ಜೂನ್ 2026
Light
Dark

ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಬೆಂಕಿ: ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲು

ಮೈಸೂರು: ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಮೈಸೂರಿನ ವಿದ್ಯಾರಣ್ಯಪುರಂ ಬಡಾವಣೆಯಲ್ಲಿ ತಡರಾತ್ರಿ ನಡೆದಿದೆ.

ವಿಷಯ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಬೆಂಕಿಯ ಕೆನ್ನಾಲಿಗೆಗೆ ಅಂಗಡಿ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ.

ಬೆಂಕಿ ಹೊತ್ತುಕೊಳ್ಳುತ್ತಿದ್ದಂತೆ ಅಂಗಡಿಯಲ್ಲಿದ್ದ ನಾಲ್ಕು ಗ್ಯಾಸ್‌ ಸಿಲಿಂಡರ್‌ಗಳನ್ನು ಸ್ಥಳಾಂತರ ಮಾಡಲಾಗಿತ್ತು. ಪರಿಣಾಮ ಮುಂದೆ ಆಗಬಹುದಾದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Tags:
error: Content is protected !!