Mysore
26
overcast clouds

Social Media

ಗುರುವಾರ, 07 ಮೇ 2026
Light
Dark

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗಾಲ್ವಾನ್‌ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯ ನಂತರ ಸುಮಾರು ಐದು ವರ್ಷಗಳ ಹಿಂದೆ ಸ್ಥಗಿತಗೊಳಿಸಲಾಗಿದ್ದ ಸೇವೆಗಳನ್ನು ಹಾಗೂ ಭಾರತ, ಚೀನಾ ಇತ್ತೀಚೆಗೆ ನೇರ ವಿಮಾನಯಾನವನ್ನು ಪುನರಾರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಸಹ ಪುನಃ ಸ್ಥಾಪಿಸಲಾಗಿದೆ. ಹೊಸ ವೀಸಾ ನಿಯಮಗಳು ಚೀನಾ, ಹಾಂಗ್‌ಕಾಂಗ್‌ ಮತ್ತು ಮಕಾವುಗಳಿಂದ ಬರುವ ಪ್ರಯಾಣಿಕರಿಗೆ ಅನ್ವಯಿಸುತ್ತವೆ.

ಸಾಮಾನ್ಯ ವೀಸಾ ಕಾರ್ಯವಿಧಾನಗಳನ್ನು ಪುನರಾರಂಭಿಸುತ್ತಿದ್ದರೂ ಕೂಡ ಭದ್ರತಾ ಕಾಳಜಿಯಿಂದಾಗಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ.

ಈ ನಿರ್ಧಾರದಿಂದ ಎರಡೂ ದೇಶಗಳ ನಡುವಿನ ಆರ್ಥಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Tags:
error: Content is protected !!