Mysore
35
few clouds

Social Media

ಶನಿವಾರ, 25 ಏಪ್ರಿಲ 2026
Light
Dark

ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಎಚ್‌.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.

ಸಿದ್ದೇಗೌಡ ಎಂಬುವವರೇ ಆನೆ ದಾಳಿಗೆ ಸಿಲುಕಿ ಗಾಯಗೊಂಡಿರುವ ರೈತನಾಗಿದ್ದಾರೆ. ಸಿದ್ದೇಗೌಡ ಅವರು ಜಮೀನಿಗೆ ತೆರಳುತ್ತಿದ್ದ ವೇಳೆ ಏಕಾಏಕಿ ಆನೆಯೊಂದು ದಾಳಿ ಮಾಡಿದೆ. ಪರಿಣಾಮ ಗಂಭೀರ ಗಾಯಗೊಂಡಿರುವ ಸಿದ್ದೇಗೌಡ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಸ್ಥಳೀಯರು ಆನೆಗಳ ಹಾವಳಿಯನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

Tags:
error: Content is protected !!