Mysore
24
overcast clouds

Social Media

ಶನಿವಾರ, 25 ಏಪ್ರಿಲ 2026
Light
Dark

ಮೇ.20ರೊಳಗೆ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಸಲೀಂ ಅಹಮ್ಮದ್‌

ಹುಬ್ಬಳ್ಳಿ: ಮೇ.20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್‌ ಕಾಂಗ್ರೆಸ್‌ ಮುಖ್ಯ ಸಚೇತಕ ಸಲೀಂ ಅಹಮ್ಮದ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ.4ರ ಫಲಿತಾಂಶದ ನಂತರ ಈ ವಿಷಯ ಚರ್ಚೆಗೆ ಬರಲಿದೆ. ಶೇ.50ರಷ್ಟು ಸಚಿವರನ್ನು ಪಕ್ಷದ ಕೆಲಸಕ್ಕೆ ನಿಯೋಜಿಸಬೇಕು. ಉಳಿದವರಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದೇವೆ. ಆದರೆ ಹೈಕಮಾಂಡ್‌ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧ ಎಂದು ಹೇಳಿದರು.

ಇನ್ನು ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡದಂತೆ ಹೈಕಮಾಂಡ್‌ ಹೇಳಿದೆ. ಹೀಗಾಗಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವುದಿಲ್ಲ ಎಂದು ತಿಳಿಸಿದರು.

Tags:
error: Content is protected !!