Mysore
33
overcast clouds

Social Media

ಬುಧವಾರ, 06 ಮೇ 2026
Light
Dark

ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಕ್ಯಾನ್ಸರ್:‌ ಪ್ರಾರಂಭಿಕ ಹಂತದಲ್ಲೇ ಚಿಕಿತ್ಸೆ

ಇಸ್ರೇಲ್:‌ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ನಾನು ಪ್ರಾಸ್ಟೇಟ್‌ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದು, ಈಗ ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ.

ನನಗೆ ಒಂದೂವರೆ ವರ್ಷಗಳ ಹಿಂದೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. 2.5 ತಿಂಗಳ ಹಿಂದೆ, ವೈದ್ಯರು ಜೆರುಸೇಲಂ ಹಡಸ್ಸಾ ಆಸ್ಪತ್ರೆಯಲ್ಲಿ ಸಣ್ಣ ಗೆಡ್ಡೆ ಕಂಡು ಹಿಡಿದು ವಿಕಿರಣ ಚಿಕಿತ್ಸೆ ನೀಡಿದ್ದರು ಎಂದು ತಿಳಿಸಿದರು.

ಇದು ದೊಡ್ಡ ಆರೋಗ್ಯ ಸಮಸ್ಯೆಯಲ್ಲ, ಸಣ್ಣ ವೈದ್ಯಕೀಯ ಸಮಸ್ಯೆಯಷ್ಟೇ ಎಂದು ಹೇಳಿದ್ದಾರೆ.

ಇಸ್ರೇಲ್‌ನ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿಯಾಗಿರುವ ನೆತನ್ಯಾಹು ಅವರು, ಇರಾನ್‌ ಯುದ್ಧದ ಜೊತೆಗೆ ಗಾಜಾ ಮತ್ತು ಲೆಬನಾನ್‌ ಸಂಘರ್ಷಗಳನ್ನೂ ಎದುರಿಸುತ್ತಿದ್ದಾರೆ.

Tags:
error: Content is protected !!