Mysore
21
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ.

ಡಾ.ರಾಜ್‌ಕುಮಾರ್‌ ಅಭಿಮಾನಿಗಳು ಸಾ.ರಾ.ಗೋವಿಂದು, ಶಿವರಾಮೇಗೌಡ ನೇತೃತ್ವದಲ್ಲಿ ಚೇತನ್‌ ಮನೆಗೆ ಮುತ್ತಿಗೆ ಹಾಕಿ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ನಡೆಸಿ ಚೇತನ್‌ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇದಕ್ಕೆ ಚೇತನ್‌ ಕೂಡ ಆಕ್ಷೇಪಿಸಿದ್ದು, ರಾಜ್‌ ಅಭಿಮಾನಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ನಾನು ಯಾರ ಮನಸ್ಸಿಗೂ ನೋವುಂಟು ಮಾಡುವ ಉದ್ದೇಶದಿಂದ ಹೇಳಿಕೆ ನೀಡಿಲ್ಲ. ರಾಜ್‌ ಕುಮಾರ್‌ ಅಭಿಮಾನಿಗಳಿಗೆ ಕ್ಷಮೆ ಕೇಳುತ್ತೇನೆ ಎಂದು ಚೇತನ್‌ ತಿಳಿಸಿದ್ದಾರೆ.

Tags:
error: Content is protected !!