Mysore
32
broken clouds

Social Media

ಮಂಗಳವಾರ, 05 ಮೇ 2026
Light
Dark

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೆಹಲಿ ಪ್ರವಾಸದ ಬಗ್ಗೆ ಕೇಳಿದಾdಗ, “ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಾವ ರಾಜಕೀಯವೂ ಇಲ್ಲ. ಏನೇನೂ ತೀರ್ಮಾನ ಆಗಿವೆಯೋ ಅವು ಚಾಲ್ತಿಗೆ ಬರಲಿವೆ” ಎಂದು ಸ್ಪಷ್ಟಪಡಿಸಿದರು.

ಪಕ್ಷದಲ್ಲಿ ಗೊಂದಲಗಳು ಇವೆ ಎಂಬ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಪಾರ್ಟಿಯಲ್ಲಿ ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಪಕ್ಷ ಮಾಡುತ್ತದೆ. ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ. ಏನು ಮಾಡಬೇಕು ಎಂಬುದು ಅವರಿಗೆ ಗೊತ್ತಿದೆ” ಎಂದು ತಿಳಿಸಿದರು.

ನಾಯಕತ್ವ ಬದಲಾವಣೆ ವಿಚಾರವಾಗಿ ಕೇಳಿದಾಗ, “ನಿಮಗೆ ಈ ಬಗ್ಗೆ ಗೊಂದಲ ಇರಬಹುದು. ನಾನು ಈ ಬಗ್ಗೆ ಯಾವತ್ತು ಚರ್ಚೆ ಮಾಡಲ್ಲ. ಹೈಕಮಾಂಡ್ ಯಾವಾಗ ಯಾವ ಸೂಚನೆ ನೀಡುತ್ತದೆಯೋ ಆವಾಗ ಅದನ್ನು ಪಾಲಿಸುತ್ತೇವೆ ಎಂದು ನಾನು ಹಾಗೂ ಸಿಎಂ ಅವರು ಹೇಳಿದ್ದು, ಅದರಂತೆ ನಡೆಯುತ್ತೇವೆ” ಎಂದು ತಿಳಿಸಿದರು.

 

Tags:
error: Content is protected !!