Mysore
34
broken clouds

Social Media

ಗುರುವಾರ, 30 ಏಪ್ರಿಲ 2026
Light
Dark

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.

ಚೇರಂಬಾಣೆ ನಿವಾಸಿ, ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ.ಯು. ರೋಹಿಣಿ(51) ಮೃತ ಶಿಕ್ಷಕಿ. ಮಾನಸಿಕ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದ ಶಿಕ್ಷಕಿ ಚೇರಂಬಾಣೆಯಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ಮುಂಜಾನೆ 5 ಗಂಟೆ ವೇಳೆಗೆ ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ ಗುಂಡು ಹಾರಿಸಿಕೊಂಡು ಅವರು ಸಾವಿಗೆ ಶರಣಾಗಿದ್ದಾರೆ.

ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಡಗು ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು.

Tags:
error: Content is protected !!