Mysore
24
scattered clouds

Social Media

ಸೋಮವಾರ, 15 ಜೂನ್ 2026
Light
Dark

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

25 ವರ್ಷದ ಯುವತಿ ಶ್ವೇತಾ ಮೃತಪಟ್ಟ ಸಾಫ್ಟ್‌ವೇರ್ ಇಂಜಿನಿಯರ್, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಪುತ್ರಿಯಾದ ಶ್ವೇತಾ ಏಪ್ರಿಲ್ 25ರಂದು ಸಂಜೆ ಮನೆಯಲ್ಲಿದ್ದಾಗ ಹಠಾತ್ತಾಗಿ ಕುಸಿದು ಬಿದ್ದಿದ್ದರು.

ತಕ್ಷಣ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದು ಆದರೆ, ಆಸ್ಪತ್ರೆಗೆ ತಲುಪುವ ವೇಳೆಗೆ ಶ್ವೇತಾ ಕೋಮಾಗೆ ಜಾರಿದ್ದರು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಚಿಕಿತ್ಸೆ ಮಾಡುತ್ತಿರುವಾಗಲೇ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡ ಶ್ವೇತಾ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ತುಂಬು ವಯಸ್ಸಿನ ಮಗಳ ಹಠಾತ್ ಸಾವಿನಿಂದ ಗಂಗಾಧರ್ ಕುಟುಂಬ ಕಂಗಾಲಾಗಿದ್ದು, ಹಸನ್ಮುಖಿ ಯುವತಿಯ ಸಾವಿಗೆ ಮ್ಯಾಗ್ನಾ ಸಾಫ್ಟ್ ಕಂಪನಿಯ ಸಹೋದ್ಯೋಗಿಗಳು ಮತ್ತು ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

Tags:
error: Content is protected !!