Mysore
23
overcast clouds

Social Media

ಶುಕ್ರವಾರ, 01 ಮೇ 2026
Light
Dark

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ: ಮಾಜಿ ಸಚಿವ ಕೆ.ಎನ್.ರಾಜಣ್ಣ

kn rajanna

ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು ನಮ್ಮ ಪ್ರಬಲ ಒತ್ತಾಯವಾಗಿದೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಮುಕ್ತ ಮನಸ್ಸಿನಲ್ಲಿದ್ದಾರೆ. ಹೈಕಮಾಂಡ್‌ ಮತ್ತು ರಾಹುಲ್‌ ಗಾಂಧಿ ಅವರು ನೀಡುವ ಯಾವುದೇ ಸೂಚನೆಯನ್ನು ಪಾಲಿಸಲು ಅವರು ಸಿದ್ಧರಿದ್ದಾರೆ. ಅಧಿಕಾರ ಮುಂದುವರಿಸಲು ಅಥವಾ ಪದತ್ಯಾಗ ಮಾಡಲು ಅವರು ಮಾನಸಿಕವಾಗಿ ಸಿದ್ಧರಾಗಿದ್ದು, ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್‌ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಹೇಳಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಮುಂದಿನ ಬಾರಿ ದಲಿತ ಸಮುದಾಯದ ನಾಯಕರು ಸಿಎಂ ಆಗಬೇಕು ಎಂಬುದು ನಮ್ಮ ಬೇಡಿಕೆ. ಈ ವಿಚಾರವನ್ನು ಈಗಾಗಲೇ ಹೈಕಮಾಂಡ್‌ ಗಮನಕ್ಕೆ ತರಲಾಗಿದೆ. ಇದರೊಂದಿಗೆ ಸಚಿವ ಸಂಪುಟ ಪುನಾರಚನೆಯೂ ಆಗಬೇಕಿದೆ. ಹೊಸಬರಿಗೆ ಸಚಿವ ಸ್ಥಾನ ನೀಡುವ ಮೂಲಕ ಆಡಳಿತದಲ್ಲಿ ಹೊಸ ಬದಲಾವಣೆ ತರಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

 

Tags:
error: Content is protected !!