Mysore
25
light rain

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪು ಸಾಗಾಟ: ಆರೋಪಿ ಬಂಧನ

ಮೈಸೂರು: ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ಯಾಸೆಂಜರ್‌ ಆಟೋದಲ್ಲಿ ಮೈಸೂರಿನಿಂದ ಪಿರಿಯಾಪಟ್ಟಣ ಕಡೆಗೆ ಅಕ್ರಮವಾಗಿ ಗಾಂಜಾ ಸೊಪ್ಪನ್ನು ಸಾಗಣೆ ಮಾಡಲಾಗುತ್ತಿತ್ತು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇಲವಾಲ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನಿಂದ ಒಟ್ಟು 1 ಕೆಜಿ 585 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

 

 

Tags:
error: Content is protected !!