Mysore
22
overcast clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ವಿನಯ್‌ ಕುಲಕರ್ಣಿ ಮೇಲ್ಮನವಿ ಅರ್ಜಿ ವಿಚಾರಣೆ ಸ್ವೀಕರಿಸಿದ ಹೈಕೋರ್ಟ್‌

Vinay Kulkarni

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಶಾಸಕ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಲು ಹೈಕೋರ್ಟ್‌ ಸ್ವೀಕಾರ ಮಾಡಿದೆ.

ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ಶಾಸಕ ವಿನಯ್‌ ಕುಲಕರ್ಣಿ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ನಡೆಯಿತು. ವಿಚಾರಣಾ ನ್ಯಾಯಾಲಯದ ದಾಖಲೆ ಹಾಜರುಪಡಸಲು ಹೈಕೋರ್ಟ್‌ ಸೂಚನೆ ನೀಡಿತು.

 

Tags:
error: Content is protected !!