Mysore
28
overcast clouds

Social Media

ಮಂಗಳವಾರ, 04 ಆಗಸ್ಟ್ 2026
Light
Dark

ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ.1ರಂದು ರಾಯಚೂರು, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಜಿಲ್ಲೆ ಸೇರಿದಂತೆ ಒಟ್ಟು 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಮೇ.2ರಂದು ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಈ ಸಮಯದಲ್ಲಿ ಬಿರುಗಾಳಿ, ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

 

Tags:
error: Content is protected !!