Mysore
26
light rain

Social Media

ಮಂಗಳವಾರ, 04 ಆಗಸ್ಟ್ 2026
Light
Dark

ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ದುರಂತ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್‌

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳ ತಲೆದಂಡವಾಗಿದೆ.

ಕರ್ತವ್ಯ ಲೋಪದ ಆರೋಪದ ಮೇಲೆ ಶಿವಾಜಿನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ ಮೊಹಮ್ಮದ್‌ ಜಾವೇದ್‌ ಹಾಗೂ ವಸಂತನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ರುದ್ರಮುನಿ ಅವರನ್ನು ಅಮಾನತು ಮಾಡಿ ಜಿಬಿಎ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

Tags:
error: Content is protected !!