Mysore
22
overcast clouds

Social Media

ಭಾನುವಾರ, 03 ಮೇ 2026
Light
Dark

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿ ಮೃತ ಗೃಹಿಣಿಯ ಪೋಷಕರು ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಗ್ರಾಮದ ಬ್ಯಾಟೇಗೌಡನ ಪತ್ನಿ ನಾಗವೇಣಿ (೨೪) ಮೃತ ಗೃಹಿಣಿಯಾಗಿದ್ದು, ಗಂಡ ಬ್ಯಾಟೇಗೌಡ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿ, ಹತ್ಯೆಗೈದು ನೀರಿನ ಕೊಳದಲ್ಲಿ ಹಾಕಿದ್ದಾನೆ ಎಂದು ಪೋಷಕರು ಶಿವಳ್ಳಿ ಠಾಣಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಕೊಳದಿಂದ ಮೃತ ನಾಗವೇಣಿ ಅವರ ದೇಹವನ್ನು ಹೊರತೆಗೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ಮಿಮ್ಸ್ ಆಸ್ಪತ್ರೆಗೆ ರವಾನಿಸಿ, ಪಂಚನಾಮೆ ಬಳಿಕ ಮೃತಳ ವಾರಸುದಾರಿಗೆ ಮೃತ ದೇಹವನ್ನು ಹಸ್ತಾಂತರಿಸಿದರು.

ಪ್ರಕರಣ ದಾಖಲಿಸಿಕೊಂಡಿರುವ ಶಿವಳ್ಳಿ ಠಾಣಾ ಪೊಲೀಸರು ಆರೋಪಿ ಪತಿ ಬ್ಯಾಟೇಗೌಡನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Tags:
error: Content is protected !!