Mysore
26
broken clouds

Social Media

ಶನಿವಾರ, 16 ಮೇ 2026
Light
Dark

ಅಸ್ಸಾಂನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

ಅಸ್ಸಾಂ : ಅಸ್ಸಾಂ ವಿಧಾನಸಭೆ ಚುನಾವಣೆಯ ಫಲಿತಾಂತ ಪ್ರಗತಿಯಲ್ಲಿದ್ದು, ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ.

ಬಿಜೆಪಿ 80, ಕಾಂಗ್ರೆಸ್‌ 26, ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ ಕನಿಷ್ಠ 64 ಸ್ಥಾನಗಳನ್ನು ಗೆಲ್ಲುವ ಬಗ್ಗೆ ಎರಡೂ ಮೈತ್ರಿಕೂಟಗಳು ಉತ್ಸುಕವಾಗಿವೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ಎನ್‌ಡಿಎಗೆ ಸುಮಾರು 100 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದ್ದರೆ, ಗೌರವ್ ಗೊಗೊಯ್ ನೇತೃತ್ವದ ಕಾಂಗ್ರೆಸ್ 10 ವರ್ಷಗಳ ನಂತರ ಅಸ್ಸೋಮ್ ಸೋನ್‌ಮಿಲಿಟೊ ಮೋರ್ಚಾ (ಎಎಸ್‌ಎಂ) ಮತ್ತೆ ಅಧಿಕಾರಕ್ಕೆ ತರಲು ಸೆಣಸಾಡುತ್ತಿದೆ.

Tags:
error: Content is protected !!