Mysore
25
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಉಪಚುನಾವಣೆ : ಎರಡು ಕ್ಷೇತ್ರಗಳಲ್ಲೂ ನಾವೇ ಗೆಲ್ತೇವೆ : ಸಿಎಂ

ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೆಕ್ ಟು ನೆಕ್ ಫೈಟ್ ಇದ್ದರೆ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆ ಸಾಧಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ದಾವಣಗೆರೆಯಲ್ಲಿ ಲೀಡ್ ಕಡಿಮೆಯಾಗಬಹುದು. ಆದರೆ ನಾವೇ ಗೆಲ್ಲುತ್ತೇವೆ. ಬಾಗಲಕೋಟೆಯಲ್ಲೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದರು.

ಇನ್ನು ತಮಿಳುನಾಡಿನ ವಿಧಾನಸಭಾ ಚುನಾವಣಾ ಫಲಿತಾಂಶ ಸಂಬಂಧ ಭರ್ಜರಿ ಮುನ್ನಡೆ ಸಾಧಿಸಿರುವ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

Tags:
error: Content is protected !!