Mysore
25
broken clouds

Social Media

ಬುಧವಾರ, 06 ಮೇ 2026
Light
Dark

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ.

ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ ರಚಿಸುವ ಉತ್ಸಾಹದಲ್ಲಿದ್ದ ಡಿಎಂಕೆ ಪಕ್ಷಕ್ಕೆ ಭಾರೀ ಆಘಾತ ಉಂಟುಮಾಡಿದೆ.

ಕಳೆದ 2011ರಿಂದಲೂ ಸತತವಾಗಿ ಗೆದ್ದು ಬರುತ್ತಿದ್ದ ಕೊಳತ್ತೂರು ಕ್ಷೇತ್ರದಲ್ಲಿ ಸ್ಟಾಲಿನ್‌ ಟಿವಿಕೆ ಅಭ್ಯರ್ಥಿ ವಿ.ಎಸ್.ಬಾಬು ಅವರ ವಿರುದ್ಧ ಸೋಲು ಕಂಡಿದ್ದಾರೆ.

ಏಪ್ರಿಲ್.‌23ರಂದು ತಮಿಳುನಾಡಿನಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ಆಡಳಿತಾರೂಢ ಡಿಎಂಕೆ ಮೈತ್ರಿಕೂಟ, ಎಐಎಡಿಎಂಕೆ ಮೈತ್ರಿಕೂಟ, ನಟ ವಿಜಯ್‌ ನೇತೃತ್ವದ ಟಿವಿಕೆ, ಎನ್‌ಟಿಕೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದವು.

ಈಗ ವಿಜಯದ ದಳಪತಿ ಅವರ ಟಿವಿಕೆ ಪಕ್ಷದ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ.

 

 

Tags:
error: Content is protected !!