Mysore
29
broken clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ.

ಮೈಸೂರು ಮೂಲದ ಸುಹೇಬ್‌(25)ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ.

ಯುವಕನನ್ನು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಹೋದ ನಾಲ್ಕೈದು ಜನರ ತಂಡ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಎಸ್ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!