Mysore
26
overcast clouds

Social Media

ಸೋಮವಾರ, 11 ಮೇ 2026
Light
Dark

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಲ್ಲೂಕಿನ ಚಂಗದಾರಹಳ್ಳಿ ಗ್ರಾಮದ ಮಾರಸ್ವಾಮಿ, ಮಣಿಕಂಠ, ಶ್ರೀರಂಗ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.

ಘಟನೆ ವಿವರ: ಚಂದದಾರಹಳ್ಳಿ ಗ್ರಾಮದ ಮಣಿ ಎಂಬುವವರು ಕಳೆದ ವಾರ ತನ್ನ ಜಮೀನಿನ ಶೆಡ್ ನಲ್ಲಿಟ್ಟಿದ್ದ ನೀರೆತ್ತುವ ಮೋಟಾರ್ ಹಾಗೂ ಇನ್ನಿತರ ವಸ್ತುಗಳು ಕಳುವಾಗಿರುವ ಬಗ್ಗೆ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.

ತಕ್ಷಣ ಕಾರ್ಯ ಪ್ರವೃತ್ತರಾದ ರಾಮಾಪುರ ಠಾಣೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ನಂತರ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತದಿಂದ ಕೃತ್ಯಕ್ಕೆ ಬಳಸಿದ್ದ ವಾಹನ, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನು ಪ್ರಕರಣ ಸಂಬಂಧ ಮತ್ತೋರ್ವ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Tags:
error: Content is protected !!