Mysore
25
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.

ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ 500 ಮೀಟರ್‌ ಅಂತರದಲ್ಲೇ ಈ ಕೊಲೆ ನಡೆದಿದ್ದು, ಶಾಂತಿನಗರ ನಿವಾಸಿ ಉಮೇರ್‌ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ.

ಇಂದು ಬೆಳಿಗ್ಗೆ 4.45ರಂದು ಉಮೇದ್ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಉದಯಗಿರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತದೇಹವನ್ನು ಕೆ.ಆರ್.‌ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

Tags:
error: Content is protected !!