Mysore
26
scattered clouds

Social Media

ಶನಿವಾರ, 16 ಮೇ 2026
Light
Dark

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರ ಕಚೇರಿಗೆ ಕಳುಹಿಸಿದ್ದಾರೆ.

ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ಎಕ್ಸ್‌ ಖಾತೆಯಲ್ಲಿ ಸ್ಟಾಲಿನ್‌ ಸುದೀರ್ಘ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿದ ತಮಿಳುನಾಡಿನ ಎಲ್ಲಾ ಜನರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ನಿಮ್ಮೆಲ್ಲರ ಪ್ರತಿಯೊಂದು ಮತವನ್ನು ನಾನು ಅಮೂಲ್ಯವಾದ ನಂಬಿಕೆ ಎಂದು ಪರಿಗಣಿಸುತ್ತೇನೆ. ಇಲ್ಲಿಯವರೆಗೆ ಲಭ್ಯವಿರುವ ಅಂಕಿ ಅಂಶಗಳ ಪ್ರಕಾರ ಡಿಎಂಕೆ ಮೈತ್ರಿಕೂಟವು 1 ಕೋಟಿ 54 ಲಕ್ಷ 82 ಸಾವಿರದ 782 ಮತಗಳನ್ನು ಪಡೆದಿದೆ. ಈ ಎಲ್ಲಾ ಜನರಿಗೆ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

 

 

Tags:
error: Content is protected !!