Mysore
22
broken clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

h vishwanath

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ ಚುನಾವಣೆಗೂ ಸ್ಪರ್ಧಿಸುವುದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಹೇಳಿದರು.

ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಹಲವು ಬಾರಿ ಚುನಾವಣೆ ಎದುರಿಸಿದ್ದೇನೆ. ಜನರೇ ಹಣ ನೀಡಿ ಆರ್ಶೀವಾದ ಮಾಡಿದ್ದರು. ಆದರೆ, ಇದೀಗ ಹಣ ನೀಡಿ ಚುನಾವಣೆ ಎದುರಿಸುವ ಪರಿಸ್ಥಿತಿ ಇದೆ. ಹೀಗಾಗಿ ಚುನಾವಣಾ ರಾಜಕಾರಣಕ್ಕೆ ವಿದಾಯ ಹೇಳುತ್ತಿದ್ದೇನೆ. ಆದರೆ ರಾಜಕೀಯದಲ್ಲಿ ಇರುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.

Tags:
error: Content is protected !!