ವಾಷಿಂಗ್ಟನ್: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇ.13ರಿಂದ 15ರವರೆಗೆ ಚೀನಾಗೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ.
ಸುಮಾರು ಒಂಭತ್ತು ವರ್ಷಗಳಲ್ಲಿ ಅಮೇರಿಕಾ ಅಧ್ಯಕ್ಷರು ಚೀನಾಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ದೀರ್ಘಾವಧಿಯ ಅಮೇರಿಕಾ-ಇಸ್ರೇಲ್-ಇರಾನ್ ಯುದ್ಧ, ಜಾಗತಿಕ ಇಂಧನ ಬಿಕ್ಕಟ್ಟಿಗೆ ಕಾರಣವಾದ ಹಾರ್ಮುಜ್ ಜಲಸಂಧಿಯ ದಿಗ್ಬಂಧನದ ಬಿಕ್ಕಟ್ಟು ಮತ್ತು ತೈವಾನ್ ಸೇರಿದಂತೆ ಹಲವಾರು ವಿಷಯಗಳ ಕುರಿತು ಎರಡೂ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಈ ಭೇಟಿ ಭಾರೀ ಮಹತ್ವ ಪಡೆದುಕೊಂಡಿದೆ.




