Mysore
23
light rain

Social Media

ಗುರುವಾರ, 21 ಮೇ 2026
Light
Dark

ತಮಿಳುನಾಡು ಸಿಎಂ ವಿಜಯ್‌ಗೆ ಕರೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡು ನೂತನ ಸಿಎಂ ವಿಜಯ್‌ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಸಿನಿಮಾ ಪ್ರಪಂಚದಿಂದ ಜನಸೇವೆಯತ್ತ ಗಮನಾರ್ಹ ಪ್ರಜಾಪ್ರಭುತ್ವ ಪ್ರಯಾಣ ಬೆಳೆಸುತ್ತಿರುವ ತಮಿಳುನಾಡಿನ ಸಿಎಂ ವಿಜಯ್‌ ಅವರಿಗೆ ಅಭಿನಂದನೆಗಳು. ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಜನರ ಅಭಿವೃದ್ಧಿ, ಸಾಂಸ್ಕೃತಿಕ ಬಾಂಧವ್ಯ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡೋಣ. ತಮಿಳುನಾಡಿನ ಜನರ ಸೇವೆಯಲ್ಲಿ ಯಶಸ್ವಿ ಮತ್ತು ಪರಿವರ್ತನಾತ್ಮಕ ಆಡಳಿತ ನೀಡಲು ಶುಭಾಶಯ ತಿಳಿಸಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ ಅವರು ವಿಜಯ್‌ಗೆ ಕರೆ ಮಾಡಿ ಮಾತನಾಡಿದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ವಿಡಿಯೋದಲ್ಲಿ ನಾನು ಸಿದ್ದರಾಮಯ್ಯ ಮಾತಾಡ್ತಿದ್ದೀನಿ. ಇತಿಹಾಸ ಸೃಷ್ಟಿ ಮಾಡಿದ ನಿಮಗೆ ಅಭಿನಂದನೆಗಳು. ಬೆಂಗಳೂರಿಗೆ ಬಂದಾಗ ಇಬ್ಬರು ಭೇಟಿಯಾಗೋಣ ಎಂದು ಹೇಳಿದ್ದಾರೆ.

 

Tags:
error: Content is protected !!