Mysore
30
overcast clouds

Social Media

ಶನಿವಾರ, 20 ಜೂನ್ 2026
Light
Dark

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು.

ಬೆಳಿಗ್ಗೆಯಿಂದ ಸುಧಾಕರ್‌ ಅವರ ನಿವಾಸದಲ್ಲಿ ಹಲವರು ಅಂತಿಮ ದರ್ಶನ ಪಡೆದರು. ಬಳಿಕ ಸುಧಾಕರ್‌ ಸ್ಟೇಡಿಯಂನಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಆ ಬಳಿಕ ಸುಧಾಕರ್‌ ಸ್ಟೇಡಿಯಂನಿಂದ ಜೈನ ಮುಕ್ತಿಧಾಮದವರೆಗೂ ತೆರೆದ ವಾಹನದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಯಿತು.

ನಂತರ ಮುಕ್ತಿಧಾಮದಲ್ಲಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಬಂದೂಕು ಪಡೆ ಗೌರವ ಸಲ್ಲಿಸಿತು. ಬಳಿಕ ಸುಧಾಕರ್‌ ಪುತ್ರ ಸುಹಾಸ್‌ ಅಂತಿಮ ವಿಧಿ ವಿಧಾನ ಕಾರ್ಯ ನೇರವೇರಿಸಿದರು. ಬಳಿಕ ಸಕಲ ಸರ್ಕಾರಿ ಗೌರವ, ಜೈನ ಸಂಪ್ರದಾಯದಂತೆ ಸಚಿವ ಸುಧಾಕರ್‌ ಅಂತ್ಯಕ್ರಿಯೆ ನೇರವೇರಿಸಲಾಯಿತು.

Tags:
error: Content is protected !!