Mysore
28
light rain

Social Media

ಭಾನುವಾರ, 17 ಮೇ 2026
Light
Dark

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ದೇವರಾಜ ಮಾರುಕಟ್ಟೆಗೆ ಭೇಟಿ ನೀಡಿದ ಸಂಸದರು, ವ್ಯಾಪಾರಸ್ಥರ ಜೊತೆ ಮಾತುಕತೆ ನಡೆಸಿದರು.

ಸರ್ಕಾರ ಹೊಸ ಕಟ್ಟಡ ನಿರ್ಮಾಣ ಮಾಡುವ ಬದಲು ಇದನ್ನೇ ಪುನಶ್ಚೇತನ ಮಾಡಬೇಕು. ಸರ್ಕಾರ ಈಗಾಗಲೇ ಹೊಸ ಕಟ್ಟಡ ನಿರ್ಮಾಣ ಮಾಡಲು ಅನುದಾನ ಮೀಸಲಿಟ್ಟಿದೆ. ಆ ಅನುದಾನದಲ್ಲೇ ನವೀಕರಣ ಮಾಡಲಿ. ವ್ಯಾಪಾರಸ್ಥರು ಒಂದೊಂದು ಭಾಗವನ್ನ ಬಿಟ್ಟುಕೊಡಲು ಸಿದ್ದರಿದ್ದಾರೆ. ನವೀಕರಣ ಮಾಡುವ ಕೆಲಸ ಕೈಗೆತ್ತಿಕೊಳ್ಳಲಿ ಎಂದು ಸ್ಥಳ ಪರಿಶೀಲನೆ ಬಳಿಕ ಮಾಧ್ಯಮಗಳಿಗೆ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ ನೀಡಿದರು.

 

Tags:
error: Content is protected !!