ನವದೆಹಲಿ: ಮೇ.3ರಂದು ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ ಪರೀಕ್ಷೆಯನ್ನು ರದ್ದುಗೊಳಿಸಿದ್ದು, ಶೀಘ್ರದಲ್ಲೇ ಪರೀಕ್ಷೆ ನಡೆಸಲು ಬದಲಿ ದಿನಾಂಕವನ್ನು ತಿಳಿಸುವುದಾಗಿ ಹೇಳಿದೆ.
ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಬಗ್ಗೆ ಮಾಹಿತಿ ಬಂದಿದ್ದು, ಈ ಆಪಾದಿತ ಅವ್ಯವಹಾರಗಳ ಕುರಿತು ತನಿಖೆ ಆರಂಭವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಮಾಹಿತಿ ಸಿಕ್ಕಿದ ಕೂಡಲೇ ಎನ್‌ಟಿಎ ಇದನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ವರ್ಗಾವಣೆ ಮಾಡಿತ್ತು.





