Mysore
23
overcast clouds

Social Media

ಶನಿವಾರ, 16 ಮೇ 2026
Light
Dark

ಕನ್ನಡದ ಖ್ಯಾತ ನಟ ದಿಲೀಪ್‌ ರಾಜ್‌ ನಿಧನ

ಬೆಂಗಳೂರು: ಕನ್ನಡದ ಖ್ಯಾತ ನಟ ದಿಲೀಪ್‌ ರಾಜ್‌ ಅವರಿಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು.

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್‌ ರಾಜ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ..

ಮನೆಯಲ್ಲೇ ದಿಲೀಪ್‌ ರಾಜ್‌ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೂ ಅವರು ಬದುಕುಳಿಯಲಿಲ್ಲ.

ದಿಲೀಪ್‌ ರಾಜ್‌ ನಿಧನಕ್ಕೆ ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

 

Tags:
error: Content is protected !!