Mysore
24
light rain

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

ನೀಟ್‌ ಪರೀಕ್ಷೆ ರದ್ದು: ಕೇಂದ್ರದ ವಿರುದ್ಧ ಮೈಸೂರು ಯೂತ್‌ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದು ಮೋದಿ ಸರ್ಕಾರದ ವೈಫಲ್ಯ. ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿರುವುದು ಬಿಜೆಪಿ ಸರ್ಕಾರವೇ. ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಸ್ಥಳಕ್ಕೆ ಸಂಸದ ಯದುವೀರ್‌ ಒಡೆಯರ್‌ ಅವರು ಬರಲೇಬೇಕು ಎಂದು ಪಟ್ಟು ಹಿಡಿದು ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

 

Tags:
error: Content is protected !!