ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.
ಈ ಕುರಿತು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಮಾಹಿತಿ ನೀಡಿದ್ದಾರೆ. ಮಂಗಳವಾರ ತಡರಾತ್ರಿ ಸೋನಿಯಾ ಗಾಂಧಿ ಅವರನ್ನು ಗುರುಗ್ರಾಮ್‌ನ ಮೆದಾಂತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೊಟ್ಟೆ ಹಾಗೂ ಮೂತ್ರದ ಸೋಂಕಿನ ಅನುಮಾನದ ಹಿನ್ನೆಲೆಯಲ್ಲಿ ವೈದ್ಯರು ವಿವಿಧ ಪರೀಕ್ಷೆಗಳನ್ನು ನಡೆಸಿದ್ದರು. ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.




