Mysore
23
overcast clouds

Social Media

ಶನಿವಾರ, 16 ಮೇ 2026
Light
Dark

16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಆದೇಶ ಪ್ರಕಟಿಸಿದೆ.

ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ಎಸ್‌ಐಆರ್‌ ನಡೆಯಲಿದೆ.

ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಹರಿಯಾಣ, ಪಂಜಾಬ್‌, ಒಡಿಶಾ, ಜಾರ್ಖಂಡ್‌, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್‌, ಸಿಕ್ಕಿಂ, ತ್ರಿಪುರಾ, ಉತ್ತರಖಂಡಾ ಕೇಂದ್ರಾಡಳಿತ ಪ್ರದೇಶಗಳಾದ ದೆಹಲಿ, ಚಂಡೀಗಢ, ದಾದ್ರಾ ಮತ್ತು ನಗರ ಹಾಗೂ ದಮನ್‌ ಮತ್ತು ದಿಯುನಲ್ಲಿ ನಡೆಯಲಿದೆ.

ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಜನಗಣತಿಯ ಮನೆ ಪಟ್ಟಿ ಮಾಡುವ ಪ್ರಕ್ರಿಯೆಯೊಂದಿಗೆ ಈ ಎಸ್‌ಐಆರ್‌ ಹಂತವನ್ನು ಜೋಡಿಸಲಾಗಿದೆ. ಇದರಿಂದ ಆಡಳಿತ ಯಂತ್ರಕ್ಕೆ ನಿಖರ ಮಾಹಿತಿ ಸಿಗಲಿದೆ.

 

Tags:
error: Content is protected !!