Mysore
23
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರಿನ ಗಿರಿಜನ ಅಕ್ರಮವಾಗಿ ಕಾಡಿನಲ್ಲಿ ಚರ್ಚ್‌ ನಿರ್ಮಿಸಿದ್ದು, ಇದರ ಉದ್ಘಾಟನೆ ಕಾರ್ಯಕ್ರಮ ಏರ್ಪಾಡು ಮಾಡಿ ತಮಿಳುನಾಡಿನಿಂದ ಜನರನ್ನು ಕರೆದಿದ್ದಾರೆ. ಈ ವೇಳೆ ಸ್ಥಳೀಯರು ಕಾರ್ಯಕ್ರಮವನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಕುಶಾಲನಗರ ಠಾಣೆ ಪೊಲೀಸರು ದಾಳಿ ನಡೆಸಿ 40ಕ್ಕೂ ಹೆಚ್ಚು ಜನರನ್ನು ವಾಹನ ಸಮೇತರಾಗಿ ವಶಕ್ಕೆ ಪಡೆದು ವಿಚಾರಣೆಗಾಗಿ ಠಾಣೆಗೆ ಕರೆದೊಯ್ದಿದ್ದಾರೆ.

Tags:
error: Content is protected !!