Mysore
25
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಒಳನಾಡು, ಕರಾವಳಿ ಪ್ರದೇಶದ ಬಹುತೇಕ ಕಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

ಯಾದಗಿರಿ, ರಾಯಚೂರು ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

 

 

Tags:
error: Content is protected !!