Mysore
28
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ ದಾಳಿಯಲ್ಲಿ 500ಕ್ಕೂ ಹೆಚ್ಚು ಡ್ರೋನ್‌ಗಳನ್ನು ಬಳಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಒಂದು ವರ್ಷದಿಂದ ರಷ್ಯಾದ ಮೇಲೆ ಉಕ್ರೇನ್‌ ಮಾಡಿರುವ ಅತಿ ದೊಡ್ಡ ದಾಳಿ ಇದಾಗಿದೆ. 556 ಉಕ್ರೇನಿನ ಡ್ರೋನ್‌ಗಳು 12ಕ್ಕಿಂತಲೂ ಹೆಚ್ಚು ವಾಯು ರಕ್ಷಣಾ ನೆಲೆಗಳನ್ನು ನಾಶಪಡಿಸಿವೆ.

ಇದರಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಪಶ್ಚಿಮ ರಷ್ಯಾದಾದ್ಯಂತ ವಿವಿಧ ಪ್ರದೇಶದ ವಸತಿ ಕಟ್ಟಡಗಳಿಗೆ ಹಾನಿಯುಂಟಾಗಿದೆ.

Tags:
error: Content is protected !!