Mysore
26
scattered clouds

Social Media

ಗುರುವಾರ, 28 ಮೇ 2026
Light
Dark

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಮೃತನನ್ನು ಕೂಡುಗದ್ದೆ ನಿವಾಸಿ ಮಧುಸೂಧನ್ ಅವರ ಪುತ್ರ ಅಭಿಜಿತ್ (21) ಎಂದು ಗುರುತಿಸಲಾಗಿದೆ.

ಅಭಿಜಿತ್ ಪ್ರಸ್ತುತ ಪ್ರಥಮ ವರ್ಷದ ಡಿಗ್ರಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಕುಟುಂಬದವರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದು ಬರಬೇಕಿದ್ದು, ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

Tags:
error: Content is protected !!