Mysore
30
scattered clouds

Social Media

ಬುಧವಾರ, 20 ಮೇ 2026
Light
Dark

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.

ಈ ಮೂಲಕ ಹಿಂದಿನ ಆದೇಶವನ್ನು ತಿದ್ದುಪಡಿ ಮಾಡಬೇಕು ಎಂದು ಸಲ್ಲಿಸಿದ್ದ ಅರ್ಜಿಗಳನ್ನು ಇಂದು ವಜಾಗೊಳಿಸಿದೆ.

ರೇಬಿಸ್‌ ಸೋಂಕು ಮತ್ತು ಗಂಭೀರ ರೋಗಗಳಿಂದ ಬಳಲುತ್ತಿರುವ ಮನುಷ್ಯರಿಗೆ ಅಪಾಯಕಾರಿಯಾದ ನಾಯಿಗಳನ್ನು ಕೊಲ್ಲುವುದಕ್ಕೆ ಅಧಿಕಾರಿಗಳಿಗೆ ಕೋರ್ಟ್‌ ಅನುಮತಿ ನೀಡಿದೆ. ಅಂತಹ ಅಧಿಕಾರಿಗಳ ವಿರುದ್ಧ ಯಾವುದೇ ಎಫ್‌ಐಆರ್‌, ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಆದೇಶದಲ್ಲಿ ಉಲ್ಲೇಖಿಸಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲು ವ್ಯವಸ್ಥಿತ ಪ್ರಯತ್ನ ಮಾಡಬೇಕು ಎಂದು ಸೂಚನೆ ನೀಡಿದೆ.

 

Tags:
error: Content is protected !!