ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಾರ್ಥಕ ಸೇವೆಗಳ ಸಮರ್ಪಣೆ ಸಾಧನಾ ಸಮಾವೇಶ ನಡೆಯುತ್ತಿದೆ.
ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ನಿರ್ಮಿಸಲಾದ ಬೃಹತ್ ವೇದಿಕೆಯಲ್ಲಿ ಸಮಾವೇಶ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಇಡೀ ಸಂಪುಟದ ಸಚಿವರು ಪಾಲ್ಗೊಂಡಿದ್ದಾರೆ. ಸಮಾವೇಶದಲ್ಲಿ ಸುಮಾರು 2 ಲಕ್ಷ ಜನರು ಭಾಗಿಯಾಗಿದ್ದಾರೆ.
ಸಮಾವೇಶದಲ್ಲಿ 1 ಲಕ್ಷದ 52 ಸಾವಿರ ಜನರಿಗೆ ಹಕ್ಕುಪತ್ರ ವಿತರಣೆ ಮಾಡಲಾಯಿತು. ಜೊತೆಗೆ 684 ಕೋಟಿ ರೂ ಮೊತ್ತದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.





