Mysore
20
overcast clouds

Social Media

ಶನಿವಾರ, 04 ಜುಲೈ 2026
Light
Dark

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ.

ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆಯೊಂದ ಉಪಟಳ ನೀಡುತ್ತಿತ್ತು. ಈ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಗುಂಬಳ್ಳಿ ಗ್ರಾಮದ ಜಮೀನೊಂದರಲ್ಲಿ ಬೋನು ಅಳವಡಿಸಿತ್ತು. ಇಂದು ಬೆಳಿಗ್ಗೆ ಚಿರತೆಯು ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Tags:
error: Content is protected !!