Mysore
23
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು, ಬಿಎಲ್‌ಎಗಳಿಗೆ ಎಸ್‌ಐಆರ್‌ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಆದ ಕಾರಣಕ್ಕೆ ಸಭೆ ಕರೆಯಲಾಗುತ್ತಿದೆ. ಪ್ರತಿಯೊಬ್ಬರೂ ಸಜ ಅರ್ಜಿ ಸಲ್ಲಿಸಬೇಕಿದೆ. ಇಲ್ಲದಿದ್ದರೆ ನಾಗರಿಕರು ತಮ್ಮ ಮತವನ್ನು ಕಳೆದುಕೊಳ್ಳುತ್ತಾರೆ. ಬೇರೆ ರಾಜ್ಯಗಳಲ್ಲಿ ಇದೇ ರೀತಿ ಆಗಿದ್ದನ್ನು ನೋಡಿದ್ದೇವೆ. ಮತದಾನದ ಹಕ್ಕು ಹೋದರೆ ಪಿಂಚಣಿ, ಗೃಹಲಕ್ಷ್ಮೀ, ಯೋಜನೆ ಸೇರಿದಂತೆ ಅನೇಕ ಅನುಕೂಲಗಳಿಂದ ನಾಗರಿಕರು ವಂಚಿತರಾಗುತ್ತಾರೆ ಎಂದು ಆರೋಪಿಸಿದರು.

 

 

Tags:
error: Content is protected !!