ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಸಂಭವಿಸಿದ ಅತಿದೊಡ್ಡ ಕೈಗಾರಿಕಾ ವಿಪತ್ತಾಗಿದೆ.
ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ ಸ್ಫೋಟ ಸಂಭವಿಸಿದೆ. ಆ ಸಮಯದಲ್ಲಿ ಒಟ್ಟು 247 ಕಾರ್ಮಿಕರು ನೆಲದಡಿಯಿದ್ದರು. ಅವರಲ್ಲಿ ಹೆಚ್ಚಿನವರನ್ನು ಮೇಲ್ಮೈಗೆ ತರಲಾಗಿದೆ.
ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಿಳಿಸಿದ್ದು, ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕರೆ ನೀಡಿದ್ದಾರೆ.




