ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ.
ಘಟನೆಯಲ್ಲಿ ಈವರೆಗೆ 6 ಮಂದಿ ಸಾವನ್ನಪ್ಪಿದ್ದು, ಇನ್ನೂ ಅನೇಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಸ್ಥಳೀಯ ಆಡಳಿತ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗೆ ಕಾರ್ಯಾಚರಣೆ ಕೈಗೊಂಡಿದೆ.





