Mysore
26
thunderstorm

Social Media

ಸೋಮವಾರ, 01 ಜೂನ್ 2026
Light
Dark

ಸುಪ್ರೀಂಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕ

ನವದೆಹಲಿ: ಸುಪ್ರೀಂಕೋರ್ಟ್‍ಗೆ ಐವರು ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ.

ನ್ಯಾಯಮೂರ್ತಿಗಳಾಗಿ ನ್ಯಾ.ವೆಂಕಿಟ ಸುಬ್ರಮಣಿ ಮೋಹನ, ನ್ಯಾ.ಚಂದ್ರಶೇಖರ್ (ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ), ನ್ಯಾ.ಶೀಲ್ ನಾಗು, (ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ನ್ಯಾ.ಸಂಜೀವ್ ಸಚ್‍ದೇವಾ (ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ಮತ್ತು ನ್ಯಾ.ಅರುಣ್ ಪಲ್ಲಿ (ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ಅವರನ್ನು ನೇಮಕ ಮಾಡಲಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆಗಳನ್ನು ಹೊರಡಿಸಿದೆ.

ಈ ಹೊಸ ನೇಮಕಾತಿಗಳೊಂದಿಗೆ ದೇಶದ ಅತ್ಯುನ್ನತ ನ್ಯಾಯಾಂಗ ಸಂಸ್ಥೆಯಾದ ಸುಪ್ರೀಂಕೋರ್ಟ್‍ನ ನ್ಯಾಯಮೂರ್ತಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗೆ ಸಹಕಾರಿಯಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ತಿಳಿಸಿದೆ.

Tags:
error: Content is protected !!