Mysore
23
overcast clouds

Social Media

ಮಂಗಳವಾರ, 02 ಜೂನ್ 2026
Light
Dark

ಓದುಗರ ಪತ್ರ: ಖಾಸಗಿ ಶಾಲೆಗಳ ಹೆಚ್ಚುವರಿ ಶುಲ್ಕ ವಸೂಲಿಗೆ ಕಡಿವಾಣ ಹಾಕಿ

ನೆರೆಯ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ರವರು, ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಪ್ರವೇಶಕ್ಕಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಶಾಲೆಯ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು ಮತ್ತು ಹೆಚ್ಚಿನ ಶುಲ್ಕವನ್ನು ಪಡೆಯಬಾರದು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಹೆಚ್ಚಿನ ಶುಲ್ಕವನ್ನು ಪಡೆದರೆ ಆ ಶಾಲೆಯ ಮಾನ್ಯತೆಯನ್ನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಪೋಷಕರಿಂದ ಗುಪ್ತ ಪ್ರವೇಶ ಶುಲ್ಕವನ್ನು (ರಸೀದಿ ನೀಡದೇ ವಸೂಲಿ ಮಾಡುವ ಹಣ), ಬಲವಂತವಾಗಿ ವಸೂಲು ಮಾಡದಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಪೋಷಕರಿಂದ ದೂರು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ .

ನಮ್ಮ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿಸುವ ಡಿ.ಕೆ. ಶಿವಕುಮಾರ್‌ರವರು ನಮ್ಮ ರಾಜ್ಯದಲ್ಲೂ ಇಂತಹ ಕಟ್ಟುನಿಟ್ಟಿನ ಆದೇಶ ಜಾರಿಗೊಳಿಸುವ ಮೂಲಕ ಖಾಸಗಿ ಶಾಲೆಗಳಿಂದ ಹೆಚ್ಚುವರಿ ಶುಲ್ಕ ವಸೂಲಿಗೆ ಕಡಿವಾಣ ಹಾಕುವುದು ಅಗತ್ಯ.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

 

Tags:
error: Content is protected !!