ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಸಂಪುಟ ರಚನೆ ವೇಳೆ ಲಿಂಗಾಯತರಿಗೆ ಸೂಕ್ತ ಪ್ರಾತಿನಿಧ್ಯ ಸಿಗಲಿದೆ. ಲಿಂಗಾಯರ ಸಮದಾಯದಲ್ಲೇ ಅತಿಹೆಚ್ಚು ಶಾಸಕರು ಇದ್ದಾರೆ. ಎಲ್ಲವನ್ನೂ ಹೈಕಮಾಂಡ್ ನಾಯಕರು ತೀರ್ಮಾನ ಮಾಡಲಿದ್ದಾರೆ. ನನಗೆ ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.




