ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮಲಿಂಗಾರೆಡ್ಡಿ ಹಲವು ಬಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ. ರಾಜೀನಾಮೆ ಸುದ್ದಿ ಹೊರ ಬರುತ್ತಿದ್ದಂತೆ ಸಿಎಂ ಡಿ.ಕೆ.ಶಿವಕುಮಾರ್, ಹರಿಪ್ರಸಾದ್ ಹಾಗೂ ನಾವು ಚರ್ಚಿಸಿದ್ದೇವೆ. ರಾಜೀನಾಮೆ ವಾಪಸ್ ಪಡೆದು ಸಚಿವರಾಗಿ ಕೆಲಸ ಮಾಡಲು ರಾಮಲಿಂಗಾರೆಡ್ಡಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದರು.





